March 15, 2026

ಉಳ್ಳಾಲ: ಬಟ್ಟೆಗೆ ಸಾಂಬಾರು ಚೆಲ್ಲಿದಕ್ಕೆ ವಿದ್ಯಾರ್ಥಿಗಳ ಮಧ್ಯೆ ಗಲಾಟೆ: ಸಹಪಾಠಿಗೆ ಚೂರಿ ಎಸೆದು ಗಾಯಗೊಳಿಸಿದ ವಿದ್ಯಾರ್ಥಿ

0
IMG-20230720-WA0017.jpg

ಉಳ್ಳಾಲ: ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಬಟ್ಟೆಗೆ ಸಾಂಬಾರು ಚೆಲ್ಲಿದ ಕಾರಣಕ್ಕೆ ಸಣ್ಣ ವಿವಾದ ತಾರಕಕ್ಕೇರಿ ಒಬ್ಬ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಗೆ ಚೂರಿ ಎಸೆದು ಗಾಯಗೊಳಿಸಿದ ಘಟನೆ ಬುಧವಾರ ಘಟಿಸಿದೆ.

ಮಧ್ಯಾಹ್ನ ಊಟದ ಹೊತ್ತಿನಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿ ಅಲ್ಲಿಂದ ಮುಂದೆ ಹೋಗುತ್ತಿರುವಾಗ ಪೆಟ್ಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಚೂರಿ ತೆಗೆದು ಆತನ ಮೇಲೆ ನೇರವಾಗಿ ಎಸೆದಿದ್ದಾನೆ. ಅದೃಷ್ಟವಶಾತ್ ಎದೆ ಭಾಗದಿಂದ ಸ್ವಲ್ಪ ಪಕ್ಕದಲ್ಲಿ ಚೂರಿ ತಗುಲಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ವೈಸ್ ಪ್ರಿನ್ಸಿಪಾಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಘಟನೆಯ ಮಾಹಿತಿ ಪಡೆದ ದಕ್ಷಿಣ ಉಪ‌ ವಿಭಾಗ ಎಸಿಪಿ, ಕೊಣಾಜೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸೇರಿದಂತೆ ಅಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಭೇಟಿ ನೀಡಿ ಹುಡುಗನಿಗೆ ಬುದ್ಧಿ ಹೇಳಿ ಮನೆಗೆ ಕಳುಹಿಸಿದ್ದು ಇಂದು ತನಿಖೆ ಮುಂದುವರಿಸಿದ್ದಾರೆ. ಒಂಬತ್ತನೆಯ ತರಗತಿ ವಿದ್ಯಾರ್ಥಿ ಚೂರಿ ಬಸ್ ಸ್ಟಾಂಡ್ ನಲ್ಲಿ ಬಿದ್ದು ಸಿಕ್ಕಿದ್ದು ಎಂದು ತಿಳಿದ್ದಾನೆ.

ಶಾಲಾಡಳಿತ, ಎಸಿಪಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!