August 12, 2026

ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ಜಾಮೀನು ಮಂಜೂರು
 

0
hr-180723-bridge-1.jpg


ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ದೆಹಲಿ ಕೋರ್ಟ್ ಜಾಮೀನು ನೀಡಿದೆ.

ಕಳೆದ ಏಪ್ರಿಲ್ 21ರಂದು ದೆಹಲಿಯ ಕನ್ನೌಟ್ ಪ್ಲೇಸ್ ಪೊಲೀಸ್ ಠಾಣೆಗೆ ಆರು ಮಂದಿ ಮಹಿಳಾ ಕುಸ್ತಿಪಟುಗಳುಬ್ರಿಜ್ ಭೂಷಣ್ ವಿರುದ್ದ ದೂರು ದಾಖಲಿಸಿದ್ದರು.ಕುಸ್ತಿಪಟುಗಳಾದ ಸಾಕ್ಷಿ ಮಲಿಕ್‌ ಮತ್ತು ವಿನೇಶ್‌ ಫೋಗಟ್‌ ಸೇರಿದಂತೆ ಏಳು ಜನ ಕುಸ್ತಿಪಟುಗಳು ಬ್ರಿಜ್‌ ಭೂಷಣ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

ಬುಧವಾರದಂದು ಭಾರತದ ಕುಸ್ತಿ ಸಂಘಟನೆಯ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಹಾಗೂ ಸಹ ಆರೋಪಿ ವಿನೋದ್ ತೋಮರ್ ಅವರಿಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು.

Leave a Reply

Your email address will not be published. Required fields are marked *

You may have missed

error: Content is protected !!