ಅಡಕೆ ಬೆಳೆ ಸಂಶೋಧನೆಗೆ 10 ಕೋಟಿ ರೂ. ಅನುದಾನ ಬಿಡುಗಡೆ
ಬೆಂಗಳೂರು: ಅಡಕೆ ಬೆಳೆ ಸಂಶೋಧನೆಗೆ ತಕ್ಷಣ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಅಡಕೆ ಸಹಕಾರ ಸಂಘ ಹಾಗೂ ಸಹಕಾರ ಮಹಾಮಂಡಳವು ಗುರುವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಅಡಕೆ ಬೆಳೆಯುವ ಪ್ರದೇಶಗಳ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಅಡಕೆ ದಾಸ್ತಾನು ಮಾಡಲು ಗೋದಾಮುಗಳಿಗೆ ಬಾಡಿಗೆ ರಿಯಾಯಿತಿ ನೀಡಲು ಸರ್ಕಾರ ಸಿದ್ಧವಿದೆ. ಅದೇ ರೀತಿ ಅಡಕೆ ಬೆಳೆ ಸಂಶೋಧನೆಗೆ ತಕ್ಷಣ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.




