“ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ” ಸಿನೆಮಾ: ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್
ಬೆಂಗಳೂರು: ಅನುಮತಿ ಇಲ್ಲದೇ ತಮ್ಮ ಫೋಟೋ ಮತ್ತು ವಿಡಿಯೋವನ್ನು ಹಾಸ್ಟೇಲ್ ಹುಡುಗರು ಬೇಕಾಗಿದ್ದರೆ ಚಿತ್ರತಂಡ ಬಳಸಿಕೊಂಡಿದೆ ಎಂದು ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದರು ಮೋಹಕ ತಾರೆ ರಮ್ಯಾ. ತಮ್ಮ ಅನುಮತಿ ಇಲ್ಲದೇ ಫೋಟೋ ಮತ್ತು ವಿಡಿಯೋ ಬಳಸಿಕೊಂಡಿದ್ದಕ್ಕೆ ಪರಿಹಾರವಾಗಿ ಒಂದು ಕೋಟಿ ರೂಪಾಯಿ ನೀಡಬೇಕು ಎಂದು ನೋಟಿಸ್ ನಲ್ಲಿ ತಿಳಿಸಿದ್ದರು.
ನಿನ್ನೆ ಕೋರ್ಟ್ ಮುಂದೆ ಬಂದಿದ್ದ ಈ ವಿಚಾರಣೆಯನ್ನು ಒಂದು ದಿನ ಮುಂದಕ್ಕೆ ಹಾಕಿ, ಮತ್ತೆ ಇಂದು ವಿಚಾರಣೆ ನಡೆಸಿತು ಮಾನ್ಯ ನ್ಯಾಯಾಲಯ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ಹುಡುಗರಿಗೆ ಜಯ ಸಿಕ್ಕಿದ್ದು, ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಾ ನಾಯಾಲಯ ವಜಾಗೊಳಿಸಿದೆ.




