August 13, 2026

ಮಂಗಳೂರಿನಲ್ಲಿ ಅನೈತಿಕ ಪೊಲೀಸ್ ಗಿರಿ ಹೆಚ್ಚಳ: ಬಜರಂಗದಳದ ಮೂವರು ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

0
image_editor_output_image-1586086186-1689931823505.jpg

ಮಂಗಳೂರು: ಇತ್ತೀಚೆಗೆ ನಡೆದ ಎರಡು ಅನೈತಿಕ ಪೊಲೀಸ್ ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರ ಬಜರಂಗದಳದ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಎಂಬ ಮೂವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಲಾಗಿದೆ. ಕಾ‌ನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.

ಇತ್ತೀಚೆಗೆ ನಡೆದ ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರಿಗೆ ಸದ್ಯ ಶೋಕಾಸ್ ನೋಟಿಸ್ ನೀಡಿದ್ದು, ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡಿಪಾರು ಆದೇಶ ಮಾಡುವ ಸಾಧ್ಯತೆಯಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂವರು ಹಿಂದೂ ಕಾರ್ಯಕರ್ತರಿಗೆ ಗಡಿಪಾರಿಗೆ ಸಿದ್ದತೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!