September 20, 2024

ಮಂಗಳೂರು: ಅನೈತಿಕ ಪೊಲೀಸ್‌ಗಿರಿ; ಕಾಲೇಜು ವಿದ್ಯಾರ್ಥಿ ಮೇಲೆ ಹಲ್ಲೆ

0

ಮಂಗಳೂರು: ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯ ಮೇಲೆ ಅನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಡೆದಿದೆ.

ಮಹಮ್ಮದ್ ಹಫೀಸ್ (20) ಹಲ್ಲೆಗೊಳಗಾದ ವಿದ್ಯಾರ್ಥಿ.

6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಣಂಬೂರು ಬೀಚ್ ಗೆ ವಿಹಾರಕ್ಕೆ ತೆರಳಿದ್ದು, ಈ ವೇಳೆ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ.

ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ 4 ಮಂದಿ ವಿದ್ಯಾರ್ಥಿನಿಯರು ತೆರಳಿದ್ದು, ಬೀಚ್ ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದ ತಂಡ ಹಲ್ಲೆ ನಡೆಸಿದೆ.

ಇನ್ನು ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!