March 21, 2026

ಮಂಗಳೂರು: 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಡಾ.ರತ್ನಾಕರ್‌ ಎರಡು ದಿನ ಪೊಲೀಸ್ ಕಸ್ಟಡಿಗೆ

0
Sexual-Harassment-at-Workplace-District-Nodal-Officer-Dr-Ratnakar-Arrested.jpg

ಮಂಗಳೂರು: ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಷ್ಠ ರೋಗ ವಿಭಾಗದ ಅಧಿಕಾರಿಯಾದ ಡಾ. ರತ್ನಾಕರ್‌ ನನ್ನು ಬಂಧಿಸಲಾಗಿದ್ದು, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಮಾಧ್ಯಮಗಳಲ್ಲಿ ಶುಕ್ರವಾರ ಡಾ. ರತ್ನಾಕರನ ರಾಸಲೀಲೆ ವೀಡಿಯೊ ಹಾಗೂ ಫೋಟೋಗಳು ಬಹಿರಂಗಗೊಳ್ಳುತ್ತಿದ್ದಂತೆ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಈತನ ವಿರುದ್ಧ ನಾಲ್ವರು ಮಹಿಳೆಯರು ಠಾಣೆಗೆ ಬಂದು ದೂರು ನೀಡಿದ್ದಾರೆ. ಇವರಲ್ಲಿ ಮೂವರು ಸಂತ್ರಸ್ತೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ರತ್ನಾಕರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಯನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಈಗಾಗಲೇ ಸೋರಿಕೆಯಾಗಿರುವ ವೀಡಿಯೋದಲ್ಲಿರುವಂತೆ ಆರೋಪಿಯು ಸಂತ್ರಸ್ತ ಮಹಿಳೆಯರನ್ನು ಕುಂದಾಪುರ, ಮುರ್ಡೇಶ್ವರ, ಮಡಿಕೇರಿ, ಪಿರಿಯಾಪಟ್ಟಣಕ್ಕೆ ಕರೆದೊಯ್ದಿರುವುದು ಕಂಡು ಬಂದಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ರತ್ನಾಕರ್ ಚೆಲ್ಲಾಟ ನಡೆಸಿದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಹಿಳಾ ಸಂಘಟನೆ ಕಾರ್ಯಕರ್ತೆಯೊಬ್ಬರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಆರೋಪಿ ರತ್ನಾಕರನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇನ್‌ಸ್ಪೆಕ್ಟರ್ ರೇವತಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯ ಮೊಬೈಲ್ ಫೋನ್‌ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!