August 12, 2026

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದು ಮನೆಯ ಮಹಡಿ ಮೇಲೆ ಬಿದ್ದ ಲಾರಿ: ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರು

0
IMG-20230722-WA0049.jpg

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದ ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.

ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಲಾರಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ.

ಲಾರಿ ಪಲ್ಟಿಯಾಗಿದ್ದು ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ.
ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯ ರಾತ್ರಿ 12.45 ರ ಸುಮಾರಿಗೆ ಬಿದ್ದಿದೆ ಎನ್ನಲಾಗಿದೆ.
ಬಾಂಬಿಲ ತಿರುವಿನಲ್ಲಿ ಚಾಲಕನಿಗೆ ನಿಯಂತ್ರಣ ಕಳೆದುಕೊಂಡು ಮನೆಯ ಮಹಡಿ ಮೇಲೆ ಹಾರಿದೆ ಎಂದು ಹೇಳಲಾಗಿದೆ.

ಘಟನೆಯ ಬಗ್ಗೆ ಯಾವುದೇ ಪ್ತಕರಣ ದಾಖಲಾಗಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!