August 12, 2026

ಮಂಗಳೂರು: ಅನೈತಿಕ ಪೊಲೀಸ್‌ಗಿರಿ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

0
IMG-20230722-WA0078.jpg

ಮಂಗಳೂರು: ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯ ಮೇಲೆ ಅನೈತಿಕ ಪೊಲೀಸ್‌ಗಿರಿ ನಡೆಸಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ಅಳಪೆ ದೀಕ್ಷಿತ್‌(32) ಹಾಗೂ ಅಳಪೆ ಬಜಾಲ್‌ ನ ಲಾಯ್ಡ್‌ ಪಿಂಟೋ(32) ಇಬ್ಬರು ಆರೋಪಿಗಳನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಕೃತ್ಯಕ್ಕೆ ಬಳಸಿದ ಸ್ಕೂಟರ್‌ ಮತ್ತು ಮೊಬೈಲ್‌ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಇಬ್ಬರು ಆರೋಪಿಗಳನ್ನು ಘನ ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದ್ದು, ವಿದ್ಯಾರ್ಥಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುರೆಸಲಾಗಿದೆ. ಇತರ ಶಂಕಿತರನ್ನು ಬಂಧಿಸಲು ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಣಂಬೂರು ಬೀಚ್ ಗೆ ವಿಹಾರಕ್ಕೆ ತೆರಳಿದ ವೇಳೆ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಲಾಗಿತ್ತು.
ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ 4 ಮಂದಿ ವಿದ್ಯಾರ್ಥಿನಿಯರು ತೆರಳಿದ್ದು, ಬೀಚ್ ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದ ತಂಡ ಹಲ್ಲೆ ನಡೆಸಿತ್ತು.

Leave a Reply

Your email address will not be published. Required fields are marked *

You may have missed

error: Content is protected !!