ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ
ಹಾಸನ: ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಂದಿತಾ (23) ಮೃತಪಟ್ಟ ಗೃಹಿಣಿ. ತಾಲ್ಲೂಕಿನ ಬೆಳಗೋಡು ಹೋಬಳಿಯ ಕೂಡನಹಳ್ಳಿ ಗ್ರಾಮದ ಸೋಮಶೇಖರ್ ಜೊತೆ ಎರಡು ತಿಂಗಳ ಹಿಂದೆಯಷ್ಟೇ ನಂದಿತಾಳನ್ನ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು.
ಆದ್ರೆ ನಂದಿತಾ ಶನಿವಾರ ತನ್ನ ತವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.




