ಸೇತುವೆ ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಮೃತ್ಯು
ಯಲ್ಲಾಪುರ: ತಾಲೂಕಿನ ಬೇಡ್ತಿ ಸೇತುವೆ ಘಟ್ಟದಲ್ಲಿ ನಡೆದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಮದ್ಯಾಹ್ನ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರರು ದಾವಣಗೆರೆ ಮೂಲದವರಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನಿಬ್ಬರಿಗೂ ಗಂಭೀರ ಗಾಯವಾಗಿದೆ.
ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಘಟನೆ ಪರಿಶೀಲಿಸಿದ್ದಾರೆ.




