March 13, 2026

ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

0
IMG-20230724-WA0001.jpg

ಕಡಬ: ಮಳೆಯ ಕಾರಣದಿಂದಾಗಿ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಜು.24) ರಜೆ ಘೋಷಣೆ ಮಾಡಲಾಗಿದೆ.

ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಕಡಬ ತಹಸೀಲ್ದಾರ್ ಅವರು ಇಂದು ರಜೆ ಘೋಷಣೆ ಮಾಡಿದ್ದಾರೆ.

ದ.ಕ ಜಿಲ್ಲೆಯಾದ್ಯಾಂತ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳು ನೀರಿನ ಮಟ್ಟ ಮೀರಿ ಹರಿಯುತ್ತಿದೆ.

Leave a Reply

Your email address will not be published. Required fields are marked *

error: Content is protected !!