June 27, 2026

ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ ಲಕ್ಷಾಂತರ ರೂ. ದರೋಡೆ

0
image_editor_output_image-1442398928-1690175549609.jpg

ಕೋಲಾರ: ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ ಲಕ್ಷಾಂತರ ರೂ. ದರೋಡೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹಂಚಾಳ ಗೇಟ್‌ನಲ್ಲಿ ಕೆನರಾ ಬ್ಯಾಂಕ್ ಎಟಿಎಂನ ಮಿಷನ್ ಅನ್ನು ಗ್ಯಾಸ್ ಕಟರ್‌ನಿಂದ ತೆರೆದು ಹಣ ಕಳ್ಳತನ ಮಾಡಲಾಗಿದೆ.

ಎಟಿಎಂನಲ್ಲಿದ್ದ ಸುಮಾರು 15 ಲಕ್ಷ ರೂ. ಹಣ ಎಗರಿಸಿರುವ ಮಾಹಿತಿಯನ್ನು ಬ್ಯಾಂಕ್ ಸಿಬ್ಬಂದಿ ನೀಡಿದ್ದು, ಸ್ಥಳಕ್ಕೆ ಕೆಜಿಎಫ್ ಡಿವೈಎಸ್‌ಪಿ ರಮೇಶ್ ಸೇರಿದಂತೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!