March 13, 2026

ಉಡುಪಿ: ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ಜಾರಿ ನೀರುಪಾಲು

0
image_editor_output_image173926164-1690177532172.jpg

ಉಡುಪಿ: ಜಲಪಾತ ವೀಕ್ಷಣೆಗೆಂದು ತೆರಳಿದ ಯುವಕನೊಬ್ಬ ಕಾಲು ಜಾರಿ ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಡೆದಿದೆ.

ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಎಂಬ ಜಲಪಾತದಲ್ಲಿ ಈ ಅವಘಡ ಸಂಭವಿಸಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂಬಾತ ನೀರುಪಾಲಾದ ಯುವಕನಾಗಿದ್ದಾನೆ.

ಈ ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!