June 27, 2026

ಮಂಗಳೂರು: MDMA ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

0
image_editor_output_image-1731440331-1690177956814.jpg

ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಂಗಳೂರು ಕದ್ರಿ ನಿವಾಸಿ ಕೌಶಿಕ್ ದೇವಾಡಿಗ (26), ಜಲ್ಲಿಗುಡ್ಡೆ ನಿವಾಸಿ ಇರ್ಷಾದ್ (29) ಬಂಧಿತ ಆರೋಪಿಗಳು.

ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಇಬ್ಬರು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಳಿಕ ಅವರಿಂದ ಒಟ್ಟು 9 ಗ್ರಾಂ ತೂಕದ 45,000 ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!