May 11, 2026

ಪುತ್ತೂರು: ತಾಲೂಕಿನಾದ್ಯಂತ ಭಾರೀ ಮಳೆ: ಶಾಸಕರ ಸೂಚನೆಯಂತೆ ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

0
IMG-20230724-WA0023.jpg

ಪುತ್ತೂರು: ಇಂದು ಬೆಳಗ್ಗಿನಿಂದ ತಾಲೂಕಿನಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಶಾಸಕ ಅಶೋಕ್‌ ಕುಮಾರ್‌ ರೈ ಭಾರೀ ಮಳೆಯ ಕಾರಣಕ್ಕೆ ಮಕ್ಕಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದ್ದು, ಅದರಂತೆ ಇಂದು ಮಧ್ಯಾಹ್ನದ ಬಳಿಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ನಾಳೆ ಮಳೆ ಪರಿಸ್ಥಿತಿ ನೋಡಿಕೊಂಡು ರಜೆ ನಿರ್ಧಾರ ಕೈಗೊಳ್ಳುವಂತೆ ಶಾಸಕರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!