ಹತ್ತನೇ ತರಗತಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ಆರೋಪ:
ಆರೋಪಿ ಶಾಲಾ ಶಿಕ್ಷಕನ ಬಂಧನ
ತಮಿಳುನಾಡು: ದಿಂಡಿಗಲ್ ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಅನುದಾನಿತ ಶಾಲೆಯ ಶಿಕ್ಷಕರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಶನಿವಾರ ವಶಕ್ಕೆ ಪಡೆಯಲಾಗಿದೆ.
ಆಂಗ್ಲ ಶಿಕ್ಷಕ ನಟರಾಯನ್ (30) ಎಂಬಾತ ಸಂತ್ರಸ್ತೆಯನ್ನು ಮದುವೆಯಾಗುವ ನೆಪದಲ್ಲಿ ಕಳೆದ ಒಂದು ವರ್ಷದಿಂದ ತನ್ನ ಮನೆಯಲ್ಲಿ ಸಂತ್ರಸ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪಳನಿ ಮಹಿಳಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಸ್ತುತ ಮಧುರೈ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.




