February 1, 2026

ಎಡಬಿಡದೇ ಸುರಿಯುತ್ತಿರುವ ಮಳೆ: ಮನೆಗಳ ಗೋಡೆ ಕುಸಿದು ಇಬ್ಬರು ಕಂದಮ್ಮಗಳು ಮೃತ್ಯು

0
image_editor_output_image-1106997783-1690267987952.jpg

ದಾವಣಗೆರೆ/ಹಾವೇರಿ: ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗಳ ಗೋಡೆ ಕುಸಿದು ಎಳೆ ಕಂದಮ್ಮಗಳು ದಾರುಣ ಸಾವಿಗೀಡಾಗಿರುವ ಘಟನೆ ದಾವಣಗೆರೆ, ಹಾವೇರಿಯಲ್ಲಿ ನಡೆದಿದೆ.

ಮನೆಯೊಂದರ ಗೋಡೆ ಕುಸಿದ ಪರಿಣಾಮ 1 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರಿನಲ್ಲಿ ನಡೆದಿದೆ.

ಕುಂಬಳೂರಿನ ಲಕ್ಷ್ಮಿ ಹಾಗೂ ಕೆಂಚಪ್ಪ ದಂಪತಿಯ ಪುತ್ರಿ ಸ್ಪೂರ್ತಿ ಮನೆಯ ಗೋಡೆ ಕುಸಿದು ಅದರಡಿ ಸಿಲುಕಿ ದಾರುಣ ಅಂತ್ಯ ಕಂಡ ಕಂದಮ್ಮ. ಕಳೆದ 4-5 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ.

ತಂದೆ-ತಾಯಿ ಜೊತೆ ಮಲಗಿದ್ದ ಬಾಲಕಿ ಮೇಲೆ ಗೋಡೆ ಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ.
ಇನ್ನು ಹಾವೇರಿಯಲ್ಲೂ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಮನೆಯ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತಪಟ್ಟ ಘಟನೆ ಮಾಳಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭಾಗ್ಯ ಚಳಮರದ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಮತ್ತೊಂದು ಮಗುವಿಗೂ ಗಾಯವಾಗಿದೆ.

Leave a Reply

Your email address will not be published. Required fields are marked *

error: Content is protected !!