March 23, 2026

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ಕಾರು, ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರು ಗಂಭೀರ

0
image_editor_output_image-1841999681-1690269774960.jpg

ವಿಟ್ಲ: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಮುಂಬೈ ಮೂಲದ ಪ್ರಯಾಣಿಕರು
ಮಂಗಳೂರುನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು,
ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

Leave a Reply

Your email address will not be published. Required fields are marked *

error: Content is protected !!