ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಇಂಜಿನೀಯರಿಂಗ್ ವಿದ್ಯಾರ್ಥಿ ಕುಸಿದುಬಿದ್ದು ಸಾವು
ಮಧುರೈ: ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಇಂಜಿನೀಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಮೃತನನ್ನು ಕಲ್ಲಕುರಿಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಉತಿರಂ 2023 ರಕ್ತದಾನ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಆತ ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಸುಬ್ರಮಣಿಯನ್ ಹಾಗೂ ವಾಣಿಜ್ಯ ತೆರಿಗೆ ಮತ್ತು ನೋಂದಣಿ ಸಚಿವ ಪಿ ಮೂರ್ತಿ ಅವರು ಚಾಲನೆ ನೀಡಿದ್ದರು.




