August 25, 2026

ಉಡುಪಿ: ಜಿಲ್ಲೆಯಲ್ಲಿ ನಾಳೆ(ಜು.26) ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ

0
IMG-20230724-WA0023.jpg


 
ಉಡುಪಿ: ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರಿನ ಹರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಮಾಡಿದೆ. ಈ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!