August 25, 2026

ನೆಲ್ಯಾಡಿ: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

0
image_editor_output_image160298551-1690347928781

ನೆಲ್ಯಾಡಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!