March 13, 2026

ಮಂಗಳೂರು: ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ನೀರಿಗೆ ಬಿದ್ದು ಸಾವು

0
image_editor_output_image328208879-1690352281063.jpg

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್‌ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ವೇಳೆ ನಡೆದಿದೆ.

ಉಳ್ಳಾಲದ ನಿವಾಸಿ ಮುಝಮ್ಮಿಲ್ (32) ಮೃತಪಟ್ಟ ಯುವಕ.

ಮಂಗಳವಾರ ಸಂಜೆ ಸುಮಾರು 4:30ರ ವೇಳೆಗೆ ದಕ್ಕೆ ಮೀನುಗಾರಿಕಾ ಜೆಟ್ಟಿ ಬಳಿ ನಿಂತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ತಕ್ಷಣ ಇತರ ಮೀನುಗಾರರು ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರೂ ಪ್ರಯೋಜನವಾಗಲಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!