March 13, 2026

ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ

0
image_editor_output_image-431432401-1690362916402.jpg

ಬೆಳಗಾವಿ: ತಾಲೂಕಿನ ನಿಲಜಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಹಣಿ ಏರ್ಪಟ್ಟಿದ್ದು, ಎರಡು ಪಕ್ಷಗಳ ಕಾರ್ಯಕರ್ತರ ಮಧ್ಯೆ ಗಲಾಟೆಯಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಎರಡು ಗುಂಪುಗಳ‌ ಮಧ್ಯೆ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಗ್ರಾ.ಪಂ ಅಧ್ಯಕ್ಷೆ ಆಕಾಂಕ್ಷಿ ಆಗಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶೀಲಾ ತಿಪ್ಪಣ್ಣವರ ಅವರು ಚುನಾವಣೆ ನಡೆಯುವಾಗಲೇ ಹೊರ ಬಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಬೆಂಬಲಿತ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ.‌ ಪರಿಣಾಮ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ ಏರ್ಪಡಿಸಲಾಗಿದೆ. ಎಸಿಪಿ ಗಿರೀಶ್ ಎನ್ ವಿ ಭರಮನಿ ಸೇರಿದಂತೆ ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!