ಉಡುಪಿ: ಜಿಲ್ಲೆಯಲ್ಲಿ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಾಳೆ ಜುಲೈ 27ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಡಳಿತ ಆದೇಶ ಮಾಡಿದೆ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಗಳಿಗೆ ರಜೆ ಇಲ್ಲವೆಂದು ಸ್ಪಷ್ಟಪಡಿಸಲಾಗಿದೆ.




