March 13, 2026

ಮಂಗಳೂರು: ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ: ಮಹಿಳಾ ಆಯೋಗದ ಸದಸ್ಯೆ, ನಟಿ ಖುಷ್ಬು ಸುಂದರ್ ಉಡುಪಿಗೆ ಆಗಮನ

0
pro.webp

ಮಂಗಳೂರು: ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಆಗಮಿಸಿದ್ದಾರೆ.

ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು ಮೆಡಿಕಲ್ ಸ್ಟೂಡೆಂಟ್’ಗೆ ಆದ ಸಮಸ್ಯೆ ವಿಚಾರಣೆಗೆ ಬಂದಿದ್ದೇನೆ. ನಾನು ಮೊದಲು ಪೊಲೀಸರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಳ್ಳುತ್ತೇನೆ. ಕಾಲೇಜ್ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ಮಾಡುತ್ತೇನೆ. ಎಲ್ಲರ ಜೊತೆ ಮಾತನಾಡಿದ ನಂತರ ನಾನು ಮಾಧ್ಯಮಗಳಿಗೆ ವಿವರಿಸುತ್ತೇನೆ.

ಪ್ರಕರಣವನ್ನು ಸಂಪೂರ್ಣವಾಗಿ ನಾನು ಮೊದಲು ಅರಿತುಕೊಳ್ಳಬೇಕಾಗಿದೆ. ಕಾಲೇಜಿಗೆ ಭೇಟಿ ಕೊಡುತ್ತೇನೆ ಸಂತ್ರಸ್ತೆ, ವಿದ್ಯಾರ್ಥಿಗಳ ಜೊತೆ ಮಾತನಾಡುತ್ತೇನೆ. ಕಾಲೇಜಿನ ಆಡಳಿತ ಮಂಡಳಿ ಜೊತೆ ಕೂಡಾ ಮಾತನಾಡುತ್ತೇನೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಪ್ರತಿಕ್ರಿಯೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!