March 13, 2026

ಆಗುಂಬೆ ಘಾಟಿಯಲ್ಲಿ ಬಿರುಕು, ರಸ್ತೆ ಕುಸಿತ: ಜು.27ರಿಂದ ಭಾರೀ ವಾಹನ ಸಂಚಾರ ನಿಷೇಧ

0
agumbe-ghat.jpg

ಉಡುಪಿ: ಉಡುಪಿ- ತೀರ್ಥಹಳ್ಳಿ ಸಂಪರ್ಕಿಸುವ ಆಗುಂಬೆ ಘಾಟಿಯ ಬಿರುಕು ಹಾಗೂ ರಸ್ತೆ ಕುಸಿತ ಹಿನ್ನೆಲೆ ಜು.27 ರಿಂದ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಆಗುಂಬೆ ಘಾಟಿಯ 6,7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡುಬಂದಿದೆ. ಆದ್ದರಿಂದ ರಸ್ತೆ ಮತ್ತಷ್ಟು ಕುಸಿದು ಅಪಘಾತದ ಸಂಭವ ಇರುವುದರಿಂದ ತಾತ್ಕಾಲಿಕವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಜು.27ರಿಂದ ಸೆಪ್ಟಂಬರ್ 15ರವರೆಗೆ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.”

Leave a Reply

Your email address will not be published. Required fields are marked *

error: Content is protected !!