ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಆತ್ಮಹತ್ಯೆ
ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆಯಲ್ಲಿ ನಡೆದಿದೆ.
ಐಶ್ವರ್ಯ (24) ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ವಿವಾಹಿತೆ ಬಿಇ (B.E) ಪದವೀಧರೆಯಾಗಿದ್ದು, 2020ರಲ್ಲಿ ಆಕೆಯ ಪೋಷಕರು ಮಂಜುನಾಥ್ ಎಂಬಾತನೊಂದಿಗೆ ವಿವಾಹ ಮಾಡಿಕೊಟ್ಟಿದ್ದರು.




