March 13, 2026

ಸಿಪಿಐ(ಎಂ) ನಾಯಕನನ್ನು ಗುಂಡಿಕ್ಕಿ ಹತ್ಯೆ

0
image_editor_output_image-2103616084-1690440843348.jpg

ರಾಂಚಿ: ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಸಿಪಿಐ(ಎಂ) ನಾಯಕರೊಬ್ಬರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಭಾಷ್ ಮುಂಡಾ ಮೃತ ಸಿಪಿಐ(ಎಂ) ಮುಖಂಡ ಎಂದು ಗುರುತಿಸಲಾಗಿದೆ. ರಾಂಚಿಯ ದಲದಾಲಿ ಚೌಕ್‌ನಲ್ಲಿರುವ ಅವರ ಕಚೇರಿಯಲ್ಲಿ ರಾತ್ರಿ 7 ರಿಂದ 8 ಗಂಟೆಯ ನಡುವೆ ಈ ಘಟನೆ ನಡೆದಿದೆ.

ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಏಳು ಬಾರಿ ಗುಂಡುಗಳನ್ನು ಹಾರಿಸಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪ್ರಕಾಶ್ ವಿಪ್ಲವ್ ಹೇಳಿದ್ದಾರೆ.

ಘಟನೆಯ ನಂತರ, ಕ್ರೋಧಗೊಂಡ ಸ್ಥಳೀಯರು ಸ್ಥಳದಲ್ಲಿದ್ದ ಅಂಗಡಿಗಳನ್ನು ಧ್ವಂಸಗೊಳಿಸಿ, ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!