March 13, 2026

ಪ್ರಿಯಕರನ ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image364798126-1690445631393.jpg

ಬೆಂಗಳೂರು: ಪ್ರಿಯಕರನ ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ.

ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ವಿದ್ಯಾಶ್ರೀ ಡೆತ್‌ನೋಟ್‌ನಲ್ಲಿ ಪ್ರಿಯಕರನ ಹೆಸರು, ಕಾರಣ ಬರೆದಿಟ್ಟು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆರೋಪಿ ಅಕ್ಷಯ್ ಹಾಗೂ ವಿದ್ಯಾಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರ ತನ್ನಿಂದ ದೂರ ಹೋಗುತ್ತಿದ್ದಾನೆ ಅಂತಾ ಅನುಮಾನಗೊಂಡ ವಿದ್ಯಾಶ್ರೀ ಆತ್ಮಹತ್ಯೆ ಹಾದಿ ಹಿಡಿದಿದ್ದಾಳೆ.

ಯುವತಿ ಮನೆಯಲ್ಲಿ ಬುಧವಾರ ಡೆತ್‌ನೋಟ್ ಪತ್ತೆಯಾದ ಬೆನ್ನಲ್ಲೇ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ನಂತರ ಆರೋಪಿ ಅಕ್ಷಯ್‌ನನ್ನ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಸದ್ಯ ಸೋಲದೇವನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!