ಶಾಲೆಗೆ ರಜೆ ನೀಡಿದ ದ.ಕ. ಜಿಲ್ಲಾಧಿಕಾರಿಗೆ ಅಭಿನಂದನೆ: ವಿದ್ಯಾರ್ಥಿಗಳು ಮಾಡಿದ ವಿಡಿಯೋ ವೈರಲ್
ಮಂಗಳೂರು : ದ.ಕ. ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳು ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
ದ.ಕ ಜಿಲ್ಲೆಯಲ್ಲಿ ಎಡೆ ಬಿಡದೆ ಬೀಳುತ್ತಿರುವ ಭಾರೀ ಮಳೆಗೆ ದ.ಕ ಜಿಲ್ಲಾಧಿಕಾರಿ ಮುಗಿಲನ್ ಮುಲ್ಲೈ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗೆ ರಜೆ ನೀಡಿದ್ದರು.
ಈ ಬಗ್ಗೆ ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳು ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.





