ಉಡುಪಿ: ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ
ಉಡುಪಿ : ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಐದು ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ನಿವಾಸಿ ಮುಫೀಝುಲ್ ಶೇಖ್(26) ಬಂಧಿತ ಆರೋಪಿಯಾಗಿದ್ದಾನೆ.
ಪಡುಬಿದ್ರೆ : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ನಿವಾಸಿ ಮುಫೀಝುಲ್ ಶೇಖ್(26) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಸ್ಕೆಟ್ ಕೊಡಿಸುವುದಾಗಿ ಬಾಲಕಿಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.





