ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದಗಳಿಂದ ನಿಂದನೆ: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ
ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಭರದಲ್ಲಿ ಸಿಎಂ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾನ್ನು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟ್ವಿಟ್ಟರ್‌ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.





