ಬಂಟ್ವಾಳ: ಬಿಜೆಪಿ ಕಾರ್ಯಕರ್ತನಿಗೆ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಡಗಬೆಳ್ಳೂರು ಪ್ರಕರಣವೊಂದರಲ್ಲಿ ಬಿಜೆಪಿ ಕಾರ್ಯಕರ್ತನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಶಿಕ್ಷೆ ಅನುಭವಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೋರ್ವ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕುದ್ಮಾರ್ ಬಾರೆಪಾಡಿ ನಿವಾಸಿ ರೋಷನ್ (32) ಬಂಧಿತ ಆರೋಪಿ.
ಕಳೆದ ಮೂರು ವರ್ಷಗಳ ಹಿಂದೆ ಈತ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆಯನ್ನು ನಡೆಸಿದ್ದ.





