ಓದು ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನದಿಗೆ ಹಾರಿ SSLC ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಓದು ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನದಿಗೆ ಹಾರಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ.
ಗೌರಿಬಿದನೂರು ನಗರದ ಸುಮಂಗಲಿ ಬಡಾವಣೆ ನಿವಾಸಿ ವಿಂಧ್ಯಶ್ರೀ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಈಕೆ ಗೌರಿಬಿದನೂರು ನಗರದ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ತಾಯಿ ಸಹ ಇದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು.




