September 20, 2024

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಪೊಲೀಸರ ವಶಕ್ಕೆ

0

ಮಂಗಳೂರು: ಬಾಲಕಿಯನ್ನು ಅತ್ಯಾಚಾರ ಮಾಡಿ ಆಕೆ ಗರ್ಭ ಧರಿಸಲು ಕಾರಣನಾಗಿದ್ದ ಆರೋಪಿಯನ್ನು ಮಂಗಳೂರಿನ ಮಹಿಳಾ ಪೊಲೀಸರು ಮತ್ತು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ಪೇಟೆಯ ಶಾಫಿ ಬಂಧಿತ ಆರೋಪಿ

12 ವರ್ಷದ ಬಾಲಕಿಯನ್ನು ಆರೋಪಿಯು ಹಲವು ಬಾರಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ಜುಲೈ 15ರಂದು ದೂರು ನೀಡಲಾಗಿತ್ತು.

ಇನ್ನು ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!