ಕಬಕ: ಪಾದಚಾರಿಗೆ ಬೈಕ್ ಡಿಕ್ಕಿ, ಒಬ್ಬರು ಗಂಭೀರ:
ದ್ವಿಚಕ್ರ ಸವಾರ ಮತ್ತು ಸಹಸವಾರನಿಗೆ ಗಾಯ

ಕಬಕ: ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕಬಕ ಜಂಕ್ಷನ್ ನಲ್ಲಿ ಇಂದು ರಾತ್ರಿ ನಡೆದಿದೆ.
ಪುತ್ತೂರುನಿಂದ ವಿಟ್ಲ ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನ ಕಬಕ ಜಂಕ್ಷನ್ ತಲುಪಿದಾಗ ಹಠತ್ತಾಗಿ ಯಾರೋ ಒಬ್ಬರು ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರನಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ.