March 13, 2026

ಕುಂದಾಪುರ: ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ಪತ್ತೆ

0
IMG-20230728-WA0021.jpg

ಕುಂದಾಪುರ: ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ.

ಭದ್ರಾವತಿ ಮೂಲದ ಯುವಕ ಶರತ್ ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು ಸ್ನೇಹಿತನೊಂದಿಗೆ ಹೋಗಿದ್ದು, ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು.

ಇನ್ನು ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸಿದ್ದವು. ಆದರೆ ತೀವ್ರ ಮಳೆ ಮತ್ತು ನೀರಿನ ರಭಸದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿತ್ತು. ಇದೀಗ ವಾರದ ಬಳಿಕ ಇಂದು ಜಾರಿ ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್‌), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್‌ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸಿದ್ದರು. ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತು.

Leave a Reply

Your email address will not be published. Required fields are marked *

error: Content is protected !!