March 13, 2026

ಉಳ್ಳಾಲ: ಶಾಲಾ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
IMG-20230730-WA0022.jpg

ಉಳ್ಳಾಲ: ಶಾಲಾ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಪೋಕ್ಸೋ ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಆರೋಪಿ ರಿಕ್ಷಾ ಚಾಲಕ ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂಬಾತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ‌.

ಜೂನ್ ತಿಂಗಳಲ್ಲಿ ಒಂಭತ್ತನೇ ತರಗತಿ ವಿದ್ಯಾರ್ಥಿನಿಗೆ ಆರೋಪಿ ಕಿರುಕುಳ ನೀಡಿದ್ದನು. ಆನಂತರ ರಿಕ್ಷಾದಲ್ಲಿ ಹೋಗುವಾಗ ಬರುವಾಗ ಕರೆಯುವುದನ್ನು ಮಾಡುತ್ತಿರುವುದರ ಕುರಿತು ವಿದ್ಯಾರ್ಥಿನಿ ಇತ್ತೀಚೆಗೆ ಹೆತ್ತವರಲ್ಲಿ ಹೇಳಿದ್ದಳು.ಇದರಿಂದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಜು.28 ರಂದು ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬಳಿಕ ರಿಕ್ಷಾ ಚಾಲಕ ಪರಾರಿಯಾಗಿದ್ದ. ಇದೀಗ ಕೊಣಾಜೆ ಪೊಲೀಸರು ಎರಡು ದಿನಗಳ ಕಾಲ ಶೋಧ ಕಾರ್ಯ ನಡೆಸಿ ನಿನ್ನೆ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!