March 13, 2026

ವಿಟ್ಲ; ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

0
IMG-20230504-WA0062.jpg

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ, ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ, ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ ಬಂಧಿತರಾಗಿದ್ದಾರೆ.

ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದು ಕೊಂಡು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದರೆ, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು.

ವಿಟ್ಲ ಠಾಣೆಯಲ್ಲಿ ಪೊಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಯುವತಿ ನೀಡಿದ ಮಾಹಿತಿಯಂತೆ ಮೂರು ಮಂದಿಯ ಬಂಧನ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!