March 13, 2026

ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆಯ ಪೇದೆಯಿಂದ ಗುಂಡಿನ ದಾಳಿ: ಆರ್‌ಪಿಎಫ್ ಸಬ್ ಇನ್ ಸ್ಪೆಕ್ಟರ್ ಸೇರಿ ನಾಲ್ವರು ಸಾವು

0
image_editor_output_image-1550848501-1690782395114.jpg

ಜೈಪುರ: ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ ಪೇದೆ ಗುಂಡು ಹಾರಿಸಿದ್ದು, ಆರ್‌ಪಿಎಫ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳಗ್ಗಿನ ಜಾವ 5 ಗಂಟೆಯ ಸುಮಾರಿಗೆ ಜೈಪುರದಿಂದ ಮುಂಬೈಗೆ ರೈಲು ಚಲಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಪೇದೆ ಸಬ್ ಇನ್ಸ್ಪೆಕ್ಟರ್ ಜೊತೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾನೆ. ಈ ವೇಳೆ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ಅವರಿಬ್ಬರ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೇದೆ ಕೋಪಗೊಂಡು ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ವರದಿಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!