ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ
ಬೆಳ್ತಂಗಡಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅರಸಿನಮಕ್ಕಿಯ ಕುಂಟಾಲಪಳಿಕೆಯಲ್ಲಿ ನಡೆದಿದೆ.
ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯ (40) ಅವರು ಎರಡು ದಿನದಿಂದ ನಾಪತ್ತೆಯಾಗಿದ್ದರು.
ಜು.30ರಂದು ಮುಂಜಾನೆ ಸಮಯ ಹರೀಶ್ ಅವರ ಶವ ತಂದೆ ಮನೆಯ ಬಾವಿಯಲ್ಲಿ ಪತ್ತೆಯಾಗಿದೆ.
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹರೀಶ್ ತಂದೆ, ತಾಯಿ ಅಕ್ಕಪಕ್ಕದಲ್ಲಿ ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದರು.
ಹರೀಶ್ ಅವರು ಅವಿವಾಹಿತರಾಗಿದ್ದು, ತಾಯಿಯೊಂದಿಗೆ ವಾಸವಿದ್ದರು.