ಕರ್ನಾಟಕದಲ್ಲಿ ಇಂದಿನಿಂದ ನಂದಿನಿ ಹಾಲಿನ ದರ 3 ರೂ. ಏರಿಕೆ
ಬೆಂಗಳೂರು : ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ ಇಂದಿನಿಂದಲೇ ಜಾರಿಗೆ ಬರಲಿದೆ. ಹಾಲಿನ ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ರಾಜ್ಯದಲ್ಲಿ ಹಾಲಿನ ದರ ಏರಿಕೆಗೆ ಪದೇ ಪದೆ ಒತ್ತಾಯ ಕೇಳಿಬರುತ್ತಿತ್ತು. ಹೀಗಾಗಿ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿತ್ತು. ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು 3 ರೂಪಾಯಿ ಬೆಲೆ ಹೆಚ್ಚಳಕ್ಕೆ ಅನುಮತಿ ನೀಡಿದ್ದರು. ಹಾಗೇ ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು.
ಟೋನ್ಡ್ ಹಾಲು (ನೀಲಿ ಪೊಟ್ಟಣ) 39 42
ಹೋಮೋಜಿನೈಸ್ಡ್ ಹಾಲು 40 43
ಹಸುವಿನ ಹಾಲು (ಹಸಿರು ಪೊಟ್ಟಣ) 43 46
ಶುಭಂ (ಕೇಸರಿ ಪೊಟ್ಟಣ) /ಸ್ಪೆಷಲ್ ಹಾಲು 45 48
ಮೊಸರು, ಪ್ರತಿ ಕೆಜಿಗೆ 47 50
ಮಜ್ಜಿಗೆ, 200 ಮಿಲಿ ಪೊಟ್ಟಣ 8 9