ಚಿಕ್ಕಮಗಳೂರು: ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ದುರ್ದೈವಿಯನ್ನು ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ಗಿರೀಶ್ (25) ಎನ್ನಲಾಗಿದೆ.
ಮೂಡಿಗೆರೆಯಲ್ಲಿ ಅಡುಗೆ ವೃತ್ತಿ ಮಾಡುತ್ತಿದ್ದ ಗಿರೀಶ್ ಕಳೆದ ವಾರವಷ್ಟೇ ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
