ಮುತ್ತಪ್ಪ ರೈ ಪುತ್ರನ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು: ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ರಿಚ್ಮಂಡ್ ರಸ್ತೆ ಬಳಿಯ ಹೋಟೆಲ್‌ವೊಂದರಲ್ಲಿ ಗಲಾಟೆ ನಡೆದಿತ್ತು. ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು.





