ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಬಾರದು ಎನ್ನಿಸುತ್ತಿದೆ: ದುನಿಯಾ ವಿಜಯ್
ಬೆಂಗಳೂರು: ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದ್ದಂತೆ ಯಾವುದನ್ನೂ ಹೆಚ್ಚು ಸಮಯ ಮರೆಮಾಚಲಾಗದು ಎಂದು ದುನಿಯಾ ವಿಜಯ್ ಬರೆದುಕೊಂಡಿದ್ದಾರೆ.
ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತೆ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಪ್ರಕರಣ ಸಂಬಂಧ 11 ವರ್ಷಗಳ ಹಿಂದೆ ಬಂಧಿತನಾಗಿದ್ದ ಸಂತೋಷ್ ರಾವ್, ದೋಷಮುಕ್ತ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಮತ್ತೆ ಸೌಜನ್ಯ ಪ್ರಕರಣ ಮುನ್ನೆಲೆಗೆ ಬಂದಿದೆ.





