March 14, 2026

ಕಾರ್ಕಳ: ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸ್ಫೋಟ, ಕಾರ್ಮಿಕ ಸಾವು

0
image_editor_output_image286006291-1690957511411.jpg

ಕಾರ್ಕಳ: ಕಾರ್ಕಳದ ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕಾರ್ಮಿಕನೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಸಾವಿಗೀಡಾದ ಘಟನೆ ಸಂಭವಿಸಿದೆ.

ಬಾಗಲಕೋಟೆಯ ವೆಂಕಟೇಶ್ (32) ಸಾವಿಗೀಡಾದ ದುರ್ದೈವಿ.

ಕ್ವಾರೆಯಲ್ಲಿ ಬಂಡೆ ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದಿಬಂದಿದೆ.

ಕ್ವಾರೆಯಲ್ಲಿ ದುಡಿಯುತ್ತಿದ್ದ ಸಂಭವಿಸಿದ ಸ್ಪೋಟದಿಂದ ವೆಂಕಟೇಶ್ ಸ್ಥಳದಲ್ಲಿ ಕುಸಿದು ಬಿದ್ದು ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!