ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಾವಂಜೆ ಬಳಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿಕೊಂಡ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಬೆನೆಟ್ ಕರ್ಕಡ(67) ಎಂದು ಗುರುತಿಸಲಾಗಿದೆ.
ಮೃತರು ಕಳೆದ ಹಲವಾರು ವರ್ಷಗಳಿಂದ ಕೃಷಿಕರಾಗಿದ್ದು ಕಳೆದ ಎರಡು ವರ್ಷದಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
