ಸ್ಟುಡಿಯೋದಲ್ಲೇ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಬಾಲಿವುಡ್ ಖ್ಯಾತ ನಿರ್ದೇಶಕನ ಮೃತದೇಹ ಪತ್ತೆ
ಮುಂಬಯಿ: ಬಾಲಿವುಡ್ ನ ಖ್ಯಾತ ಕಲಾ ನಿರ್ದೇಶಕರೊಬ್ಬರು ತಮ್ಮ ಸ್ಟುಡಿಯೋದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬಾಲಿವುಡ್ ನ ಕಲಾ ನಿರ್ದೇಶಕ ನಿತಿನ್ ದೇಸಾಯಿ ಮುಂಬಯಿಯ ಕರ್ಜಾತ್ ಬಳಿಯ ಖಲಾಪುರ್ ರಾಯ್‌ಗಢ್‌ನಲ್ಲಿರುವ ಅವರ ಎನ್‌ಡಿ ಸ್ಟುಡಿಯೋದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಅವರ ಸಾವಿನ ಸುದ್ದಿಯ ಕುರಿತು ಬಿಜೆಪಿಯ ಕರ್ಜಾತ್‌ನ ಸ್ಥಳೀಯ ಶಾಸಕ ಮಹೇಶ್ ಬಾಲ್ಡಿ “ನಿತಿನ್ ದೇಸಾಯಿ ಅವರು ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.





