ಪತ್ನಿಯಿಂದ ಕಿರುಕುಳ: ನವವಿವಾಹಿತ ಆತ್ಮಹತ್ಯೆ
ಹಾಸನ: ಪತ್ನಿ ಹಾಗೂ ಆಕೆಯ ಪೋಷಕರ ಕಿರುಕುಳದಿಂದ ಮನನೊಂದು ನವವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಚನ್ನರಾಯಪಟ್ಟಣದ ಕರಿಯಪ್ಪನಗುಡಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಕಿರಣ್ ಬಿ.ಬಿ (26) ಎಂದು ಗುರುತಿಸಲಾಗಿದೆ. ಆತ ಉದಯಪುರದಲ್ಲಿ ಬೇಕರಿ ನಡೆಸುತ್ತಿದ್ದ. ಕಳೆದ ಫೆ.19 ರಂದು ವಗರಹಳ್ಳಿ ಗ್ರಾಮದ ಸ್ಪಂದನಾ (24) ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದ.
ಮದುವೆ ನಂತರ ಸ್ಪಂದನಾ ಕಿರಣ್‍ನೊಂದಿಗೆ ಸಂಸಾರ ನಡೆಸದೇ ತವರು ಮನೆ ಸೇರಿದ್ದಳು. ಬಳಿಕ ಆಕೆಯ ತಂದೆ ವಾಸು, ತಾಯಿ ಗೀತಾ, ಅಜ್ಜಿ ರತ್ನಮ್ಮ ಕಿರಣ್ ಬಳಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು. ಅಲ್ಲದೇ ಮೂವರು ಸೇರಿ ಕಿರಣ್‍ಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ.





